ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರೈತರು ಭಾರೀ ನಷ್ಟ ಅನುಭವಿಸಿರುವ ಘಟನೆ ನಡೆದಿದೆ.
ಹುಣಸೂರು ತಾಲ್ಲೂಕಿನಲ್ಲಿ ನಿನ್ನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ತಂಬಾಕು ಸಸಿ ತೀವ್ರ ಹಾನಿಯಾಗಿದ್ದು, ರೈತ ಚಂದ್ರಪ್ಪ ಅವರು ಕಂಗಾಲಾಗಿದ್ದಾರೆ.
ಜಮೀನಿನಲ್ಲಿ ಭಾರೀ ಪ್ರಮಾಣದ ಆಲಿಕಲ್ಲುಗಳು ಬಿದ್ದಿದ್ದ ಪರಿಣಾಮ ಬೆಳೆ ಸಂಪೂರ್ಣ ನಾಶವಾಗಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.





