Mysore
20
overcast clouds

Social Media

ಶುಕ್ರವಾರ, 02 ಜನವರಿ 2026
Light
Dark

ಧಾರಾಕಾರ ಮಳೆಗೆ ನಂಜನಗೂಡಿನಲ್ಲಿ ಮನೆ ಕುಸಿತ: ತಪ್ಪಿದ ಭಾರೀ ಅನಾಹುತ

ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ.

ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಭಾರೀ ಮಳೆಯಿಂದ ಮಹದೇವಮ್ಮ ಹಾಗೂ ನಿಂಗಯ್ಯ ಎಂಬುವವರ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಒಳಗಡೆ ಹೋದ ಕೆಲವೇ ಕ್ಷಣಗಳಲ್ಲಿ ಮನೆ ಗೋಡೆ ಕುಸಿತವಾಗಿದ್ದು, ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮರಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮಹೇಶ್‌, ಕುಟುಂಬಸ್ಥರಿಗೆ ಧೈರ್ಯ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇದ್ದ ಒಂದು ಮನೆಯನ್ನು ಕಳೆದುಕೊಂಡು ಈಗ ಮಹದೇವಮ್ಮ ಕುಟುಂಬ ಕಂಗಾಲಾಗಿದ್ದು, ಸರ್ಕಾರ ಕೂಡಲೇ ಆಶ್ರಯ ಮನೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Tags:
error: Content is protected !!