ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ.
ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು ಸಮಸ್ಯೆಗಳನ್ನು ಸೃಷ್ಟಿಸುತ್ತಲೇ ಇದೆ. ಭಾರೀ ಮಳೆಯಿಂದ ಮಹದೇವಮ್ಮ ಹಾಗೂ ನಿಂಗಯ್ಯ ಎಂಬುವವರ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮನೆಯ ಒಳಗಡೆ ಹೋದ ಕೆಲವೇ ಕ್ಷಣಗಳಲ್ಲಿ ಮನೆ ಗೋಡೆ ಕುಸಿತವಾಗಿದ್ದು, ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮರಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮಹೇಶ್, ಕುಟುಂಬಸ್ಥರಿಗೆ ಧೈರ್ಯ ಹೇಳಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಸಂಬಂಧ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇದ್ದ ಒಂದು ಮನೆಯನ್ನು ಕಳೆದುಕೊಂಡು ಈಗ ಮಹದೇವಮ್ಮ ಕುಟುಂಬ ಕಂಗಾಲಾಗಿದ್ದು, ಸರ್ಕಾರ ಕೂಡಲೇ ಆಶ್ರಯ ಮನೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…