ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ಸಂಜೆ ನಾಲ್ಕು ಗಂಟೆ ವೇಳೆಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸುರಿಯಿತು. ಭಾರೀ ಮಳೆಯಿಂದ ಮಕ್ಕಳು ಶಾಲೆಯಿಂದ ಮನೆಗೆ ಹೋಗಲು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸಿ, ಕೊನೆಗೆ ಮಳೆ ನಿಂತ ಮೇಲೆ ತಮ್ಮ ತಮ್ಮ ಊರುಗಳಿಗೆ ತೆರಳಿದರು.