ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್ ಮಾಡಲಾಗಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ ನಾಣಚ್ಚಿ ಗೇಟ್ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ರದ್ದುಪಡಿಸಲಾಗಿದೆ.
ಇದನ್ನೂ ಓದಿ:- ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಆದರೆ ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಕೇಂದ್ರದಲ್ಲಿ ಸಫಾರಿಗಳು ಎಂದಿನಂತೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.





