Mysore
21
mist

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ 23,500 ಕ್ಯೂಸೆಕ್ಸ್‌ ಒಳಹರಿವು

Heavy rain Wayanad

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.

ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 72.80 ಅಡಿಗಳಾಗಿದೆ. 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 12.61 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ:- ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಇದಾಗಿದ್ದು, ಡ್ಯಾಂ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

Tags:
error: Content is protected !!