ಮೈಸೂರು

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 79.90 ಅಡಿಗಳಾಗಿದೆ.

19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 16.41 ಟಿಎಂಸಿ ನೀರು ಸಂಗ್ರಹವಾಗಿದೆ.

ಒಳಹರಿವಿನ ಪ್ರಮಾಣ ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

26 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

44 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago