ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 79.90 ಅಡಿಗಳಾಗಿದೆ.
19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 16.41 ಟಿಎಂಸಿ ನೀರು ಸಂಗ್ರಹವಾಗಿದೆ.
ಒಳಹರಿವಿನ ಪ್ರಮಾಣ ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…