Mysore
32
scattered clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

Kabini Dam

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಜಲಾಶಯದ ಇಂದಿನ ಒಳಹರಿವು 15,849 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 5000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 78.77 ಅಡಿಗಳಾಗಿದೆ. 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 16.34 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಭರ್ತಿಗೆ ಕೇವಲ 6 ಅಡಿ ಮಾತ್ರ ಬಾಕಿಯಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!