Kabini Dam
ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 15,849 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 5000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 78.77 ಅಡಿಗಳಾಗಿದೆ. 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 16.34 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಭರ್ತಿಗೆ ಕೇವಲ 6 ಅಡಿ ಮಾತ್ರ ಬಾಕಿಯಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…