Heavy rain Wayanad
ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 72.80 ಅಡಿಗಳಾಗಿದೆ. 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 12.61 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ:- ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಇದಾಗಿದ್ದು, ಡ್ಯಾಂ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…