ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿ. ಎಸ್. ಪುಟ್ಟರಾಜುರವರ ಅರವತ್ತು ಅಡಿ ಎತ್ತರದ ಕಟೌಟ್ ಗಳು, ವಿದ್ಯುತ್ ಕಂಬಗಳು, ತೆಂಗಿನ ಮರಗಳು ಧರೆಗುರುಳಿವೆ.
ಎಚ್.ಡಿ.ಚೌಡಯ್ಯ ರಸ್ತೆ, ಆಲೆಮನೆಯ ರಸ್ತೆ ಹಾಗೂ ಪುಣ್ಯಶ್ರೀ ಇಂಡಸ್ಟ್ರೀಸ್ ರಸ್ತೆಯಲ್ಲಿ ಹಾಡ್ಯ ಕೃಷ್ಣ ಅವರಿಗೆ ಸೇರಿದ ಜಮೀನಿನಲ್ಲಿದ್ದ ತೆಂಗಿನ ಮರಗಳು ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ಸುಮಾರು ೧೦ರಿಂದ ೧೫ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಾಡ್ಯ ಕೃಷ್ಣ ಅವರ ಜಮೀನಿನಲ್ಲಿದ್ದ ತೆಂಗಿನ ಮರಗಳು ಬಿರುಗಾಳಿಗೆ ಹಾನಿಗೊಳಗಾಗಿದ್ಧು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ವಿಷಯ ತಿಳಿದ ಸೆಸ್ಕ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಶನಿವಾರ ಬೆಳಿಗ್ಗೆಯಿಂದಲೇ ವಿದ್ಯುತ್ ಕಂಬಗಳನ್ನು ಸರಿಪಡಿಸಲು ಕಾರ್ಯ ಪ್ರವೃತ್ತರಾಗಿದ್ದಾರೆ. ಬಿರುಗಾಳಿ, ಮಳೆಯಿಂದ ಹೊಳಲು ಗ್ರಾಮಕ್ಕೆ ಶುಕ್ರವಾರ ರಾತ್ರಿಯಿಂದ ಶನಿವಾರ ರಾತ್ರಿ ೭ ಗಂಟೆಯವರೆಗೆ ವಿದ್ಯುತ್ ಕಡಿತಗೊಂಡಿತ್ತು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…