Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.

ಜಲಾಶಯದ ಇಂದಿನ ಒಳಹರಿವು 30,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 45,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 83 ಅಡಿಗಳಾಗಿದೆ. 19.52 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 19.22 ಟಿಎಂಸಿ ನೀರು ಸಂಗ್ರಹವಾಗಿದೆ.

ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಇನ್ನು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಡ್ಯಾಂ ಮುಂದಿನ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.

Tags:
error: Content is protected !!