Kabini reservoir
ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 30,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 45,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 83 ಅಡಿಗಳಾಗಿದೆ. 19.52 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 19.22 ಟಿಎಂಸಿ ನೀರು ಸಂಗ್ರಹವಾಗಿದೆ.
ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಡ್ಯಾಂ ಮುಂದಿನ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…