Mysore
22
broken clouds

Social Media

ಭಾನುವಾರ, 25 ಜನವರಿ 2026
Light
Dark

ವಯನಾಡಿನಲ್ಲಿ ಭಾರೀ ಮಳೆ : ಕಬಿನಿ ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರು ಬಿಡುಗಡೆ

ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80 ಅಡಿಗಳಾಗಿದೆ.

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಹೀಗೆ ಮಳೆ ಮುಂದುವರೆದರೆ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಬಿನಿ ಜಲಾಶಯ ತುಂಬಲಿದೆ.

Tags:
error: Content is protected !!