ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 80 ಅಡಿಗಳಾಗಿದೆ.
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಹೀಗೆ ಮಳೆ ಮುಂದುವರೆದರೆ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಕಬಿನಿ ಜಲಾಶಯ ತುಂಬಲಿದೆ.
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…