ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ.
ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ನಡು ರಸ್ತೆಯ ಮೇಲೆ ಬಿದ್ದಿದೆ. ಬೃಹದಾಕಾರದ ಕೊಂಬೆ ಇಡೀ ರಸ್ತೆಯನ್ನೇ ಆವರಿಸಿದೆ.
ಬೆಳಿಗ್ಗೆ 9.30 ಗಂಟೆಯಾದರು ಅದು ರಸ್ತೆಯಲ್ಲಿಯೇ ಬಿದ್ದಿದ್ದು, ಆ ರಸ್ತೆ ಮೂಲಕ ವಾಣಿಜ್ಯ ವಿಭಾಗ, ಗಣಿತ ಶಾಸ್ತ್ರ ವಿಭಾಗ, ಮಾನವಿಕ ಸಭಾಂಗಣ, ಗ್ರಂಥಾಲಯ ಸೇರಿದಂತೆ ವಿವಿಧ ಕಡೆಗಳಿಗೆ ಬದಲಿ ರಸ್ತೆ ಬಳಸಿ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.
ಮರದ ಕೊಂಬೆ ಬಿದ್ದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಕಾಲೇಜಿಗೆ ವಿದ್ಯಾರ್ಥಿಗಳು ಬಳಸುವ ರಸ್ತೆ ಮೇಲೆ ಮರದ ಕೊಂಬೆ ಬಿದ್ದಿದ್ದು, ಅದನ್ನು ಇನ್ನು ತೆರವುಗೊಳಿಸದೇ ಇರುವುದು ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋಟ್:
ಕ್ಯಾಂಪಸ್‌ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಮಳೆ ಬಂದರೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ. ಸಮರ್ಪಕ ಡ್ರೈನೇಜ್ ವ್ಯವಸ್ಥೆಯಿಲ್ಲ. ಮಳೆ ಬಂದರೇ ಮರದ ಕೊಂಬೆಗಳು ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಸ್ಥಿತಿಯಲ್ಲಿದ್ದು, ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆ ಮುರಿದು ಬಿದ್ದಿದೆ. ಇದರಿಂದ ಯಾರಿಗಾದರೂ ಹಾನಿಯಾಗಿದ್ದರೇ ಯಾರು ಹೊಣೆ. ಈ ಬಗ್ಗೆ ವಿವಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
-ಮನೋಜ್.ಎನ್, ಅಭಿವೃದ್ಧಿ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…