ಮೈಸೂರು : ಎಚ್ ಡಿ ಕೋಟೆಯ ಕಬಿನಿ ಜಲಾಶಯದಿಂದ ೨೫ ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುತ್ತಿರುವುದರಿಂದ ನಂಜನಗೂಡಿನ ನಂಜುಡೇಶ್ವರ ದೇವಾಲಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಇನ್ನು ಕಪಿಲಾ ನದಿ ಉಕ್ಕಿಹರಿಯುತ್ತಿರುವುದರಿಂದ ನದಿಗೆ ಇಳಿಯದಂತೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೈಕ್ ಮೂಲಕ ದೇವಾಲಯದ ಸಿಬ್ಬಂದಿ ಸೂಚನೆ ನೀಡುತ್ತಿದ್ದಾರೆ. ಅಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮತ್ತೊಂದು ಕಡೆ ೧೬ ಕಾಲು ಮಂಟಪ ಸಹ ಅರ್ಧದಷ್ಟು ಮುಳುಗಡೆಯಾಗಿದೆ. ಜೊತೆಗೆ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ಸಹ ನೀಡಲಾಗಿದೆ.