ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ.
ಇದನ್ನು ಓದಿ: ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ
ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದರು.
ಮಂಜುಳ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಪರಮೇಶ್ವರ್ ಎಂಬುವವರೂ ಸಹ ಸಾವನ್ನಪ್ಪಿದ್ದಾರೆ.





