ಮೈಸೂರು

ರೈತರ ಕುಟುಂಬಗಳಿಗೆ ನೆರವಾಗುವುದು ಎಲ್ಲಾ ಅಧಿಕಾರಿಗಳ ಹೊಣೆಗಾರಿಕೆ: ಡಾ. ಪಿ.ಶಿವರಾಜು

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ಸೂಚಿಸಿದರು.

ಇಂದು (ಆ.19) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದೆ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯನ್ನು ಪ್ರತಿ ತಿಂಗಳಿಗೆ ಎರಡು ಬಾರಿ ನಡೆಸಲಾಗುವುದು ಇದರಿಂದ ರೈತರ ಕುಟುಂಬಗಳಿಗೆ ನೆರವು ನೀಡಲು ಹಾಗೂ ಸಮರ್ಪಕ ಉಸ್ತುವಾರಿ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಆಗಬಾರದು. ಒಂದು ವೇಳೆ ಹಾಗೆನಾದರೂ ಆದಲ್ಲಿ 24 ಗಂಟೆಯೊಳಗಾಗಿ ಅಧಿಕಾರಿಗಳು ಭೇಟಿ ನೀಡಿ ರೈತ ಕುಟುಂಬಕ್ಕೆ ಸ್ಪಂದಿಸಬೇಕು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ವಿಧವಾ ವೇತನ, ಹಾಸ್ಟೆಲ್ ವ್ಯವಸ್ಥೆ, ಆಯುಷ್ಮಾನ್ ಕಾರ್ಡ್ ಇತ್ಯಾದಿ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಡಿಎ, ಎಡಿಎ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.…

38 seconds ago

ಓದುಗರ ಪತ್ರ: ಶಾಲಾ ಪ್ರವೇಶಾತಿಗೆ ವಯೋಮಿತಿ ಸಡಿಲಿಸಿ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ…

5 mins ago

ಬಿಸಿಲ ದಾಹ ತಣಿಸಲು ಕಲ್ಲಂಗಡಿ ಲಗ್ಗೆ

ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ…

8 mins ago

ಮೋದಿ ಸರ್ಕಾರದ ‘ಇರಾನ್ ನೀತಿ’ ಬದಲಾದದ್ದೇಕೆ?

* ಪ್ರಧಾನಿ ಮೋದಿ ಆರಂಭದ ವರ್ಷಗಳಲ್ಲಿ ಇಸ್ರೇಲ್ -ಇರಾನ್ ಜೊತೆಗೆ ಉತ್ತಮ ಸಂಬಂಧವನ್ನೇ ಮುಂದುವರಿಸಿದ್ದರು * ಈಗ ಧಿಡೀರ್‌ನೇ ಯೂ…

12 mins ago

34 ವರ್ಷಗಳ ಬಳಿಕ ಮತ್ತೆ ‘ಕರ್ಣಾಟ ಭಾರತ ಕಥಾಮಂಜರಿ’ ಕೃತಿ

ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಮರುಮುದ್ರಣ; ಓದುಗರಿಗೆ ಲಭ್ಯ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್…

20 mins ago

ಬಿಸಿಲೂ ಆಘಾತ; ಮುನ್ನೆಚ್ಚರಿಕೆ ಸೂಕ್ತ

ಗಿರೀಶ್ ಹುಣಸೂರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ,…

25 mins ago