Mysore
20
overcast clouds
Light
Dark

ನರೇಂದ್ರ ಮೋದಿ ಪ್ರಮಾಣವಚನಕ್ಕೆ ಯಾರೆಲ್ಲಾ ಬರ್ತಾರೆ, ಇಲ್ಲಿದೆ ನೋಡಿ ಲಿಸ್ಟ್‌

ನವದೆಹಲಿ: ಜೂನ್ 9 ರಂದು ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಹುತೇಕ ಖಚಿತವಾಗಿದೆ.

ಜೂನ್‌ 9 ರ ರಾತ್ರಿ 6 ಗಂಟೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣಕ್ಕೂ ಮುನ್ನ ಎನ್ ಡಿಎ ಮೈತ್ರಿಕೂಟದ ಸದಸ್ಯರ ಸಭೆ ನಡೆಯಲಿದೆ.

ಈ ಹಿನ್ನೆಲೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ವರದಿಯಾಗಿದೆ.

2014 ಮತ್ತು 2019 ರಲ್ಲಿ ಯಾರೆಲ್ಲಾ ಬಂದಿದ್ರು?

2019ರಲ್ಲಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ BIMSTEC ಪ್ರಧಾನಿಗಳನ್ನು ಆಹ್ವಾನಿಸಿತ್ತು.
ಬಾಂಗ್ಲಾದೇಶ, ಭೂತಾನ್, ಭಾರತ, ಮಯನ್ಮಾರ್, ನೇಪಾಳ, ಶ್ರೀಲಾಂಕ ಮತ್ತು ಥೈಲ್ಯಾಂಡ್ ದೇಶಗಳು BIMSTEC ಸದಸ್ಯ ರಾಷ್ಟ್ರಗಳಾಗಿವೆ. ಈ ಎಲ್ಲಾ ನಾಯಕರು ಸೇರಿದಂತೆ 8 ಸಾವಿರ ಅತಿಥಿಗಳನ್ನು ಆಹ್ವಾನಿಸಲಾಗಿತ್ತು.

2014ರಲ್ಲಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿತ್ತು. ಅಂದಿನ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಷರೀಫ್ ಸಹ ಪದಗ್ರಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇಂದು ಅನೇಕ ಗಣ್ಯರಿಗೆ ಆಹ್ವಾನ ನೀಡುವ ಸಾಧ್ಯತೆ
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರನ್ನು ಸಹ ಪದಗ್ರಹಣ ಕಾರ್ಯಕ್ರಮ ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನುಳಿದಂತೆ ವಿದೇಶಿ ಗಣ್ಯರಿಗೆ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ. 2019 ರಲ್ಲಿ ನರೇಂದ್ರ ಮೋದಿಯವರೊಂದಿಗೆ 24 ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬಾರಿ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಮಿತ್ರ ಪಕ್ಷಗಳು ಪ್ರಾಬಲ್ಯ ಹೊಂದುವ ಸಾಧ್ಯತೆಗಳಿವೆ. ಈ ಬಾರಿ ಬಿಜೆಪಿಗೆ ಮ್ಯಾಜಿಕ್ ನಂಬರ್ ಸಿಗದ ಕಾರಣ, ಮಿತ್ರಪಕ್ಷಗಳ ವಿಶ್ವಾಸವನ್ನು ಕಾಯ್ದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.