Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ನಿಂದ ಕ್ಲೀನ್‌ಚಿಟ್‌ ಸಿಕ್ಕಿದೆ: ಯತೀಂದ್ರ

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ. ಸಿಎಂ ಅವರಿಗೆ ನಮ್ಮ ಬೆಂಬಲ ಇದೆ ಎಂದು ದೆಹಲಿ ಹೈಕಮಾಂಡ್‌ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಗುರುವಾರ ಮೈಸೂರಿನಲ್ಲಿ ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳ ಆರೋಪಗಳಿಗೆ ಉತ್ತರ ನೀಡಿದ ಯತೀಂದ್ರ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರದ್ದು ಯಾವುದೇ ತಪ್ಪಿಲ್ಲ ಎಂದು ಹೈಕಮಾಂಡ್‌ ಹೇಳಿದ್ದು, ನಮ್ಮ ಪಕ್ಷದ ನಾಯಕರ ಬೆಂಬಲ, ಕಾರ್ಯಕರ್ತರು, ಸಾರ್ವಜನಿಕರ ಬೆಂಬಲ ನಮಗೆ ಸಿಕ್ಕದೆ ಎಂದರು.

ಸುಳ್ಳು ಸುದ್ದಿ ಹರಡಿಸಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಇದು ನಡೆಯದಂತೆ ನಾವು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದರಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್‌ ಆರೋಪ ನಮ್ಮ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನವನ್ನು ತಿಳಿಸಿದಂತಾಗುತ್ತದೆ. ಸಿದ್ದರಾಮಯ್ಯ ಅವರ ವಿಚಾರ ಸಂಕೀರ್ಣಗಳ ಮೂಲಕ ಬಿಜಪಿಯ ದುರುದ್ದೇಶವನ್ನು ಸಾರ್ವಜನಿಕರಿಗೆ ತಿಳಿಸಿದ ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂದು ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.

Tags:
error: Content is protected !!