ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಿದೆ. ಸಿಎಂ ಅವರಿಗೆ ನಮ್ಮ ಬೆಂಬಲ ಇದೆ ಎಂದು ದೆಹಲಿ ಹೈಕಮಾಂಡ್ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಗುರುವಾರ ಮೈಸೂರಿನಲ್ಲಿ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಆರೋಪಗಳಿಗೆ ಉತ್ತರ ನೀಡಿದ ಯತೀಂದ್ರ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರದ್ದು ಯಾವುದೇ ತಪ್ಪಿಲ್ಲ ಎಂದು ಹೈಕಮಾಂಡ್ ಹೇಳಿದ್ದು, ನಮ್ಮ ಪಕ್ಷದ ನಾಯಕರ ಬೆಂಬಲ, ಕಾರ್ಯಕರ್ತರು, ಸಾರ್ವಜನಿಕರ ಬೆಂಬಲ ನಮಗೆ ಸಿಕ್ಕದೆ ಎಂದರು.
ಸುಳ್ಳು ಸುದ್ದಿ ಹರಡಿಸಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಇದು ನಡೆಯದಂತೆ ನಾವು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದರಿದ್ದೇವೆ ಎಂದರು.
ಬಿಜೆಪಿ-ಜೆಡಿಎಸ್ ಆರೋಪ ನಮ್ಮ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನವನ್ನು ತಿಳಿಸಿದಂತಾಗುತ್ತದೆ. ಸಿದ್ದರಾಮಯ್ಯ ಅವರ ವಿಚಾರ ಸಂಕೀರ್ಣಗಳ ಮೂಲಕ ಬಿಜಪಿಯ ದುರುದ್ದೇಶವನ್ನು ಸಾರ್ವಜನಿಕರಿಗೆ ತಿಳಿಸಿದ ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂದು ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…