ಮೈಸೂರು

ನೈಸರ್ಗಿಕವಾಗಿ ಬೆಳೆದ ಮಾವಿನ ಹಣ್ಣಿಗೆ ಭಾರಿ ಬೇಡಿಕೆ

ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ.

ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ ವಿವಿಧ ಸೊಪ್ಪುಗಳ ಮಾರಾಟ ಮಾಡುವ ಹಣ್ಣುಗಳ ಸಂತೆಯಲ್ಲಿ ಮೊದಲ ದಿನವೇ ಗ್ರಾಹಕರು ಖರೀದಿಯ ಭರಾಟೆ ಜೋರಾಗಿತ್ತು,

ಮೂರು ಎಕರೆ ಜಾಗದಲ್ಲಿ ಕೃಷಿ ಬೇಸಾಯ ಮಾಡುವ ರೈತ ಅವಿನಾಶ್ ಅವರು ಮೈಸೂರಿನ ಹೊರವಲಯದಲ್ಲಿರು ತಮ್ಮ ಮೂರು ಎಕರೆ ಜಮೀನಿನಲ್ಲಿ ತಮ್ಮ ಕುಟುಂಬಕ್ಕೆ ಬೇಕಾಗುವ ಆಹಾರ ಪದಾರ್ಥಗಳನ್ನು ಬೆಳೆದು ಜೊತೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಬಗೆಯ ಹಣ್ಣುಗಳು, ತರಕಾರಿಗಳನ್ನು ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೈಸರ್ಗಿಕ ಪದಾರ್ಥಗಳನ್ನು ಖರೀದಿಸುತ್ತಿದ್ದಾರೆ.

ಇಂದು ಮತ್ತು ನಾಳೆ ನಡೆಯುವ 2 ದಿನಗಳ ಹಣ್ಣುಗಳ ಸಂತೆಯಲ್ಲಿ ಮಲ್ಲಿಕಾ ಮಾವು, ಬಾಳೆಕಾಯಿ, ಬಾಳೆ ದಿಂಡು, ತೆಂಗಿನ ಕಾಯಿ, ಕರಿಬೇವು, ಎಳೆನೀರು, ತೆಂಗಿನಕಾಯಿ, ಸ್ಟಾರ್ ಫ್ರುಟ್ಸ್ ಸೇರಿದಂತೆ ಅನೇಕ ಉತ್ಪನ್ನ ಗಳನ್ನು ಮಾರಾಟ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

6 hours ago