ಮೈಸೂರು

ಮೈಸೂರಿನಲ್ಲಿ ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟನೆ

ಮೈಸೂರು : ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಉದ್ಘಾಟಿಸಿದರು.

ಬೆಂಗಳೂರಿನ ಎಪಿಕ್‌ ಎಂಟರ್‌ ಪ್ರೈಸನ್‌ ವತಿಯಿಂದ ಝಿಯಾನ್‌ ಎಲೆಕ್ಟ್ರಿಕ್‌ ಸಂಸ್ಥೆ ಸಹಯೋಗದಲ್ಲಿ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದ ಆದಿತ್ಯ ಟೆಕ್‌ ಪಾರ್ಕ್‌ ಆವರಣದಲ್ಲಿ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಆರಂಭಿಸಲಾಗಿದೆ.

ನೂತನವಾಗಿ ಆರಂಭಿಸಿರುವ ಖಾಸಗಿ ಇವಿ ಚಾರ್ಜಿಂಗ್ ಸ್ಪೇಷನ್‌ ಮೈಸೂರು ಜಿಲ್ಲೆಯ ಮೊದಲ ಇ-ಬಸ್ ಚಾರ್ಜಿಂಗ್ ಕೇಂದ್ರವಾಗಿದ್ದು, 180 ಕಿಲೋ ವ್ಯಾಟ್‌ ಸಾಮರ್ಥ್ಯದ ಎರಡು ಚಾರ್ಜಿಂಗ್‌ ಹಬ್‌ಗಳನ್ನು ಈ ಚಾರ್ಜಿಂಗ್‌ ಸ್ಟೇಷನ್‌ ಒಳಗೊಂಡಿದೆ.

ಇವಿ ಹಬ್ ಆಗಿ ಮೈಸೂರು : ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಇವಿ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ 5,880 ಪಬ್ಲಿಕ್ ಚಾರ್ಜಿಂಗ್ ಸ್ಪೇಷನ್‌ಗಳಿವೆ. ಈ ನಿಟ್ಟಿನಲ್ಲಿ ಮೈಸೂರು ಇವಿ ಹಬ್‌ ಆಗಿಯೂ ಬೆಳೆಯುತ್ತಿದ್ದು, ಮೈಸೂರಿನಲ್ಲಿ ಪ್ರಸ್ತುತ 57 ಪಬ್ಲಿಕ್ ಚಾರ್ಜಿಂಗ್ ಸ್ಟೇಷನ್ಸ್‌ ಹಾಗೂ 20 ಖಾಸಗಿ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಟಿಯರ್-2 ಇವಿ ಹಬ್ ಆಗಿ ವೇಗವಾಗಿ ಬೆಳೆಯುತ್ತಿದೆ.

ಝಿಯೋನ್‌ ಸಂಸ್ಥೆ ಕುರಿತು : 2019ರಲ್ಲಿ ಆರಂಭವಾದ ಝಿಯೋನ್ ಎಲೆಕ್ಟ್ರಿಕ್‌ ಸಂಸ್ಥೆ ಇವಿ ಚಾರ್ಜಿಂಗ್‌ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದೆ. ತಮಿಳುನಾಡಿನಲ್ಲಿ ಮೊದಲ ಇವಿ ಚಾರ್ಜಿಂಗ್ ಸ್ಟೇಷನ್ ಆರಂಭಿಸಿದ ಈ ಸಂಸ್ಥೆ, ಪ್ರಸ್ತುತ ದಕ್ಷಿಣ ಭಾರತದಲ್ಲಿ 450ಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಸ್ಪೇಷನ್‌ಗಳನ್ನು ಹೊಂದಿದ್ದು, ಇದರಲ್ಲಿ ಶೇ.99 ಚಾರ್ಜಿಂಗ್‌ ಸ್ಟೇಷನ್‌ಗಳು ಪ್ರಮುಖ ಹೆದ್ದಾರಿಗಳು ಮತ್ತು ಪ್ರವಾಸಿ ತಾಣಗಳಲ್ಲಿ ಹೊಂದಿದೆ.

ಈ ಸಂದರ್ಭದಲ್ಲಿ ಸೆಸ್ಕ್‌ನ ತಾಂತ್ರಿಕ ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್‌, ಸೆಸ್ಕ್‌ನ ಐಟಿ ಮತ್ತು ಎಂಐಎಸ್‌ ವಿಭಾಗದ ಪ್ರಧಾನ ವ್ಯವಸ್ಥಾಪಕ ರಾಮಸ್ವಾಮಿ ಸೆಸ್ಕ್‌ ನಿವೃತ್ತ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ಝಿಯಾನ್‌ ಚಾರ್ಜಿಂಗ್‌ ಸ್ಟೇಷನ್‌ನ ಮುಖ್ಯಸ್ಥ ಅಖಿಲ್‌ ಕೃಷ್ಣನ್, ಬೆಂಗಳೂರಿನ ಎಪಿಕ್‌ ಎಂಟರ್‌ಪ್ರೈಸಸ್‌ನ ಚಿರಾಗ್‌ ಹಾಗೂ ವಿಶಾಲ್‌, ಇತರರಿದ್ದರು.

ಭವಿಷ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಗಣನೀಯವಾಗಿ ಹೆಚ್ಚಾಗಲಿದೆ. ಇದಕ್ಕಾಗಿ ಹೆಚ್ಚಿನ ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಆರಂಭಿಸುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೆಸ್ಕ್‌ನಲ್ಲಿ ಇವಿ ಸೆಲ್‌ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಇವಿ ವಾಹನಗಳ ಬಳಕೆಯ ಮೂಲಕ ಎಲ್ಲರೂ ಹಸಿರು ಸಂಚಾರ ಕ್ರಾಂತಿಗೆ ಕೈಜೋಡಿಸಬೇಕಿದ್ದು, ಇದರಿಂದ ಗ್ರೀನ್‌ ಎನರ್ಜಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಕೆ.ಎಂ. ಮುನಿಗೋಪಾಲ್‌ ರಾಜು , ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್‌.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

5 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago