ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಂಸತ್ ಕಲಾಪದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ-766 ತಿರುವು ಯೋಜನೆ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಹೆದ್ದಾರಿ ಸಚಿವರು ಉತ್ತರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹೆದ್ದಾರಿ ತಿರುವು ಯೋಜನೆಯಿಂದ ಮೈಸೂರು-ನೀಲಗಿರಿ ಕಾರಿಡಾರ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೆದ್ದಾರಿ ಸಚಿವಾಲಯ ಸ್ಪಷ್ಟಪಡಿಸಿದೆ.
ಅತಿ ಶೀಘ್ರದಲ್ಲಿ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಇನ್ನಷ್ಟು ಚುರುಕು ಪಡೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.





