ಮೈಸೂರು

ಇತಿಹಾಸ ತಿಳಿಸುವ ನಾಣ್ಯ, ನೋಟುಗಳು : ಗೌತಮ್‌ ಜಂತಕಲ್

ಮೈಸೂರು: ಪ್ರಾಚೀನ ಕಾಲದ ನಾಣ್ಯ, ನೋಟುಗಳು ಇತಿಹಾಸ ತಿಳಿಸುವ ಸಾಧನವಾಗಿವೆ. ನಾಣ್ಯಗಳಿಂದ ಅಂದಿನ ಕಾಲದ ಆರ್ಥಿಕ, ಸಾಮಾಜಿಕ ಹಾಗೂ ಸೈನಿಕ ವ್ಯವಸ್ಥೆಗಳ ಬಗ್ಗೆ ತಿಳಿಯಬಹುದು ಎಂದು ಸಂಪನ್ಮೂಲ ವ್ಯಕ್ತಿ ಗೌತಮ್‌ ಜಂತಕಲ್ ಹೇಳಿದರು.

ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಕರ್ನಾಟಕ ನಾಣ್ಯ ಪರಂಪರೆ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಾತತ್ವ ಉತ್ಖನನದ ವೇಳೆ ದೊರೆತ ನಾಣ್ಯಗಳು, ಅಂದಿನ ಸಾಮ್ರಾಜ್ಯದ ಸಾಮ್ರಾಟರ ಕಾಲಾನುಕ್ರಮಗಳ ಬಗ್ಗೆ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದರು.

ಉತ್ಖನನದ ವೇಳೆ ಸಿಗುವ ಮಡಿಕೆ, ಕಲ್ಲಿನ ಚೂರುಗಳಲ್ಲಿ ಕಾಲಮಾನ ಇರಲ್ಲ. ಆದರೆ, ನಾಣ್ಯಗಳಲ್ಲಿ ರಾಜನ ಚಿತ್ರ, ದೇವ-ದೇವಿಯರ ಚಿತ್ರ ಸೇರಿದಂತೆ ಅನೇಕ ಮಾಹಿತಿ ಇರುತ್ತದೆ. ಇದರಿಂದ ಆಡಳಿತಯುಗ, ಧಾರ್ಮಿಕ ನಂಬಿಕೆಗಳು ಹೀಗೆ ಎಲ್ಲವೂ ತಿಳಿಯಲಿದೆ. ಉತ್ಖನನದಲ್ಲಿ ದೊರಕುವ ನಾಣ್ಯದ ಮಹತ್ವ ಅಪಾರ ಎಂದು ವಿವರಿಸಿದರು.

ಇತಿಹಾಸದ ಆರಂಭ ಕಾಲದ ನಾಣ್ಯಗಳಿಂದ ಬ್ರಿಟಿಸ್‌ ಈಸ್ಟ್‌ ಇಂಡಿಯಾ ಕಂಪನಿಯವರೆಗೂ ನಾಣ್ಯಗಳು ನಮಗೆ ಉತ್ಖನನದ ವೇಳೆ ದೊರಕಿವೆ. ಇವು ಇತಿಹಾಸ ರಚಿಸುವಲ್ಲಿ ವಿದ್ವಾಂಸರುಗಳಿಗೆ ಪೂರಕವಾಗಿವೆ. ಮೌರ್ಯರು, ಶಾತವಾಹನರು, ಕದಂಬರು, ರಾಷ್ಟ್ರಕೂಟರು ಹಾಗೂ ಗಂಗರ ಕಾಲದ ನಾಣ್ಯಗಳು ಅಂದಿನ ಕಾಲದ ರಾಜಕೀಯ, ಆರ್ಥಿಕ, ಧಾರ್ಮಿಕ, ಸಾಮಾಜಿಕ ಹಾಗೂ ತಾಂತ್ರಿಕ ಇತಿಹಾಸದ ಬಗ್ಗೆ ತಿಳಿಸುತ್ತದೆ. ದೇಶ, ವಿದೇಶಗಳ ಸ್ವಾತಂತ್ರ್ಯಪೂರ್ವ ಮತ್ತು ನಂತರದ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಲಾಗಿದೆ. ಇವುಗಳ ವೀಕ್ಷಣೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಿದೆ ಎಂದು ಅಭಿಪ್ರಾಯಪಟ್ಟರು.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಮಾತನಾಡಿ, ನಮ್ಮ ಇಲಾಖೆಯಿಂದ ಈವರೆಗೂ ಸುಮಾರು 9 ಸಾವಿರು ಶಾಸನಗಳನ್ನು ಪತ್ತೆ ಹಚ್ಚಿ ಸಂರಕ್ಷಿಸುವ ಕೆಲಸ ನಡೆದಿದೆ. ಇದಲ್ಲದೆ ಪುರಾತತ್ವ ವಿದ್ಯಾರ್ಥಿ, ಸಂಶೋಧಕರ ನೆರವಿನಿಂದ ಗ್ರಾಮವಾರು ಸ್ಮಾರಕ, ವೀರಗಲ್ಲು, ಮಾಸ್ತಿಗಲ್ಲುಗಳ ಸರ್ವೇಕಾರ್ಯ ಮಾಡಲಾಗಿದೆ. ಪುರಾತತ್ವ ಎಲ್ಲರಿಗೂ ತಿಳಿಯಬೇಕೆಂಬುದು ನಮ್ಮ ಇಚ್ಛೆ ಎಂದು ಹೇಳಿದರು.

ಈವರೆಗೂ 510ಕ್ಕೂ ಹೆಚ್ಚು ಕೇಂದ್ರ ಸಂರಕ್ಷಿತ ಪ್ರದೇಶ ಹಾಗೂ 810 ರಾಜ್ಯ ಸಂರಕ್ಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇನ್ನೂ ಎಷ್ಟೋ ಸ್ಮಾರಕಗಳು ಮಣ್ಣಲ್ಲಿ ಉದುಗಿಹೋಗಿವೆ. ನಿಮ್ಮ ನಿಮ್ಮ ಸ್ಥಳೀಯ ಪ್ರದೇಶದಲ್ಲಿ ಕಾಣಸಿಗುವ ವೀರಗಲ್ಲು, ಮಾಸ್ತಿಗಲ್ಲು ಹಾಗೂ ಸ್ಮಾರಕಗಳನ್ನು ಗುರುತಿಸಿ ಹತ್ತಿರದ ತಾಲೂಕು ಅಧಿಕಾರಿ ಹಾಗೂ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿ. ಪರಂಪರೆ ಉಳಿಸುವ ನಿಟ್ಟಿನಲ್ಲಿ ನಮ್ಮ ಕಾರ್ಯಕ್ಕೆ ಕೈಜೋಡಿಸಿ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್, ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಸಿ.ಎನ್. ಮಂಜುಳಾ, ಪುಟ್ಟಸ್ವಾಮಿ, ರಾಕೇಶ್ ಸೇರಿದಂತೆ ಪುರಾತತ್ವ ವಿದ್ಯಾರ್ಥಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago