ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭಾರೀ ಜನಸ್ಥೋಮ ಕಂಡುಬಂತು.
ಯುಗಾದಿ ಹಬ್ಬದಂದು ಮೈಸೂರು ಅರಮನೆ, ಚಾಮುಂಡೇಶ್ವರಿ ದೇವಸ್ಥಾನ ಮತ್ತು ಬೃಂದಾವನ ಉದ್ಯಾನಗಳಲ್ಲಿ ಭಕ್ತರು ಮತ್ತು ಪ್ರವಾಸಿಗರು ದಟ್ಟಣೆಯಾಗಿ ಆಗಮಿಸಿದ್ದರು. ರಂಜಾನ್ ಮುಗಿಯುವ ಸಂದರ್ಭದಲ್ಲಿ ಈದ್ ರಜೆಯೂ ಸೇರಿಕೊಂಡಿದ್ದರಿಂದ ಬೆಂಗಳೂರು, ಇತರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದಾರೆ. ಇದರಿಂದ ಮೈಸೂರು ಅರಮನೆಯಲ್ಲಿ ಟಿಕೆಟ್ ಕೌಂಟರ್‌ಗಳ ಬಳಿ ದೊಡ್ಡ ಸರತಿ ಸಾಲುಗಳು, ಚಾಮುಂಡಿ ಬೆಟ್ಟದಲ್ಲಿ ವಾಹನ ದಟ್ಟಣೆ ಮತ್ತು ಬೃಂದಾವನ ಉದ್ಯಾನದಲ್ಲಿ ಜನರ ಗುಂಪುಗಳು ಕಂಡುಬಂತು.
ಮೈಸೂರು ಅರಮನೆಯಲ್ಲಿ ಯುಗಾದಿ ಸಂದರ್ಭದಲ್ಲಿ ವಿಶೇಷ ದೀಪಾಲಂಕಾರ ಮತ್ತು ಸಂಗೀತ ಸಂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಚಾಮುಂಡೇಶ್ವರಿ ದೇವಾಲಯದಲ್ಲಿ ಯುಗಾದಿ ವಿಶೇಷ ಪೂಜೆಗಳು ನಡೆದಿದ್ದು, ಭಕ್ತಾಧಿಗಳ ದಟ್ಟಣೆ ಹೆಚ್ಚಾಗಿದೆ. ಮೈಸೂರು ಮೃಗಲಾಯ ಮತ್ತು ಇತರ ಸ್ಥಳಗಳಲ್ಲೂ ಕುಟುಂಬಗಳೊಂದಿಗೆ ಪ್ರವಾಸಿಗರು ಹೆಚ್ಚಾಗಿ ಕಂಡುಬಂದಿದ್ದಾರೆ.
ಹೆಚ್ಚುವರಿ ಪೊಲೀಸ್ ಇದ್ದರು ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು ಅಲ್ಲಲ್ಲಿ ಕಂಡುಬಂತು.





