arrested
ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್‌ಟೇಬಲ್ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಅವರನ್ನು ಖೆಡ್ಡಾಗೆ ಕೆಡವಿ ಬ್ಲ್ಯಾಕ್‌ಮೇಲ್ ಮಾಡಿ ಹಣ ದೋಚಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಯುವತಿಯೊಬ್ಬಳು ದಿನೇಶ್ ಅವರ ಬಟ್ಟೆ ಅಂಗಡಿಗೆ ತೆರಳಿ ಪರಿಚಯ ಮಾಡಿಕೊಂಡಿದ್ದಳು. ದಿನೇಶ್ ಕುಮಾರ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಕೂಡ ಶುರು ಮಾಡಿದ್ದಳು. ಮನೆಯಲ್ಲಿ ಯಾರೂ ಇಲ್ಲ, ಕಾಫಿಗೆ ಬನ್ನಿ ಎಂದು ದಿನೇಶ್ ಕುಮಾರ್‌ಗೆ ಆಹ್ವಾನ ನೀಡಿದ್ದಳು.
ಯುವತಿ ಮಾತಿಗೆ ಮರುಳಾದ ದಿನೇಶ್ ಕುಮಾರ್ ಆಕೆಯ ಮನೆಗೆ ಹೋಗಿದ್ದಾರೆ. ಈ ವೇಳೆ ಮನೆಗೆ ನುಗ್ಗಿದ ಕಾನ್ಸ್‌ಟೇಬಲ್ ಶಿವಣ್ಣ ಹಾಗೂ ಮೂರ್ತಿ ದಿನೇಶ್ ಕುಮಾರ್‌ಗೆ ಹಿಗ್ಗಾಮುಗ್ಗಾ ಥಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಘಟನೆ ಬಗ್ಗೆ ಹೊರಗಡೆ ಹೇಳಬಾರದು ಎಂದರೆ 10 ಲಕ್ಷ ಹಣ ಕೊಡು ಎಂದು ಹೆದರಿಸಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಸಹೋದರನಿಗೆ ಕರೆ ಮಾಡಿ 10 ಲಕ್ಷ ಹಣ ತರುವಂತೆ ಹೇಳಿದ್ದಾರೆ.
10 ಲಕ್ಷ ಹಣ ತರುವಂತೆ ದಿನೇಶ್ ಹೇಳಲು ಕಾರಣವೇನು ಎಂದು ಅನುಮಾನಗೊಂಡಿದ್ದ ಸಹೋದರ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕಾನ್ಸ್‌ಟೇಬಲ್ ಶಿವಣ್ಣ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…