ಮೈಸೂರು : ಬಟ್ಟೆ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ತಲೆಮರಿಸಿಕೊಂಡಿದ್ದ ಕವನ ಹಾಗೂ ಸೈಫ್ ಎನ್ನುವವರೇ ಬಂಧಿತರು. ಇವರು ನೆರೆ ರಾಜ್ಯ ಕೇರಳದ ಕಣ್ಣೂರಿನ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಎಂಬಾತನನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿದ್ದ ಕವನ ಹಾಗೂ ಸೈಫ್ ಜೋಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಈ ಸಂಬಂಧ ದಿನೇಶ್ ಬೈಲುಕುಪ್ಪೆ ಠಾಣೆಗೆ ದೂರು ನೀಡಿದ್ದರು. ಬಳಿಕ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು, ಪ್ರಕರಣದಲ್ಲಿ ಭಾಗಿಯಾಗಿದ್ದ ಪೋಲಿಸ್ ಪೇದೆ ಶಿವಣ್ಣ, ಆನಂದ ಹಾಗೂ ಮೂರ್ತಿಯನ್ನು ಬಂಧಿಸಿ, ಜೈಲಿಗಟ್ಟಿದ್ರು. ಆದರೆ ಹನಿಟ್ರ್ಯಾಪ್ ಕಿಂಗ್ ಪಿನ್ ಕವನ ಹಾಗೂ ಸೈಫ್ ತಲೆಮರೆಸಿಕೊಂಡಿದ್ದರು.
ಇದೀಗ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.





