lakshmi hebbalkar
ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ ಹಾಗೂ ಹೋಟೆಲ್ ಮಾಲೀಕರ ಧರ್ಮದತ್ತಿ ಸಹಯೋಗದೊಂದಿಗೆ ಮಹಿಳಾ ಹೋಟೆಲ್ ಉದ್ಯಮಿಗಳು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಶ್ರಮಿಕರನ್ನು ಅಭಿನಂದಿಸಿ ಮಾತನಾಡಿದ ಸಚಿವರು, ಸಮಾಜದಲ್ಲಿ ಸಾಧಕರನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು.
ಇವತ್ತಿನ ದಿನಗಳಲ್ಲಿ ಹೋಟೆಲ್ ಉದ್ಯಮ ಎಂಬುದು ತಮಾಷೆ ಅಲ್ಲ. ಎಲ್ಲಾ ವರ್ಗದವರನ್ನು ಅತಿಥಿ ದೇವೋಭವ ಅಂತ ಸೇವೆ ಮಾಡುವುದೇ ಹೋಟೆಲ್ ಉದ್ಯಮದ ಕೆಲಸ. ಮೈಸೂರಿನ ಹೋಟೆಲ್ ಉದ್ಯಮಿಗಳು, ಸಹಕಾರ ಬ್ಯಾಂಕ್ ಸ್ಥಾಪಿಸುವ ಮೂಲಕ ಎಲ್ಲರಿಗೂ ಆಶ್ರಯ ನೀಡುತ್ತಿದ್ದಾರೆ ಎಂದು ಹೇಳಿದರು. ನಾನು ಕೂಡ ಬೆಳಗಾವಿಯಲ್ಲಿ ಹೋಟೆಲ್ ಹೊಂದಿರುವೆ, ಎರಡು ಸಕ್ಕರೆ ಕಾರ್ಖಾನೆಯನ್ನು ಹೊಂದಿರುವೆ, ಹೀಗಾಗಿ ಹೋಟೆಲ್ ಉದ್ಯಮದ ಬಗ್ಗೆ ಅಲ್ಪ ಸ್ವಲ್ಪ ತಿಳಿದುಕೊಂಡಿರುವೆ ಎಂದರು. ಸಂಘಟನೆ, ಸಂಘ- ಸಂಸ್ಥೆಗಳನ್ನು ಕಟ್ಟುವುದು ತಮಾಷೆಯ ಮಾತಲ್ಲ.
ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ
ಹಸಿದವರಿಗೆ ಅನ್ನ ಹಾಕುವ ಮೂಲಕ ಸಾಮಾಜಿಕ ಕಾರ್ಯಕ್ರಮವನ್ನು ಹೋಟೆಲ್ ಉದ್ಯಮದವರು ಮಾಡುತ್ತಿದ್ದಾರೆ. 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಈ ಸೊಸೈಟಿಗೆ ಅಡಿಗಲ್ಲು ಹಾಕಿದ್ದರು. ಅವರೇ ಬೆಳ್ಳಿ ಹಬ್ಬದ ಸಮಾರಂಭವನ್ನು ಉದ್ಘಾಟನೆ ಮಾಡಿದ್ದಾರೆ. ಇದು ನಿಜಕ್ಕೂ ಸೊಸೈಟಿಯ ದೊಡ್ಡ ಸಾಧನೆ. ಈ ಹೋಟೆಲ್ ಸೊಸೈಟಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು. ಇವತ್ತು ಕರಾವಳಿ ಭಾಗದ ಉದ್ಯಮಿಗಳು ಅದರಲ್ಲೂ ಹೋಟೆಲ್ ಉದ್ಯಮಿಗಳು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಒಂದೊಂದು ಕೋಟಿ ರೂ. ದೇಣಿಗೆ ನೀಡುತ್ತಾರೆ.
ಇದು ಅವರ ಧನ್ಯತೆಯನ್ನು ತೋರುತ್ತದೆ ಎಂದರು. ವಿವಿಧ ಸ್ತರದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಅದರಲ್ಲೂ ನರ್ಸ್ ಗಳ ಸೇವೆ ನಿಜಕ್ಕೂ ಶ್ಲಾಘನೀಯ, ನಾನು ಅಪಘಾತದಿಂದ ಆಸ್ಪತ್ರೆಯಲ್ಲಿದ್ದಾಗ ನರ್ಸ್ ಗಳೇ ನನಗೆ ಧೈರ್ಯ ತುಂಬಿದರು ಎಂದು ಹೇಳಿದರು. ಈ ವೇಳೆ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾರಾಯಣ ವಿ ಹೆಗಡೆ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಸಿ, ರವಿ ಶಾಸ್ತ್ರಿ, ಆನಂದ್ ಎಂ.ಶೆಟ್ಟಿ, ಸುಮಿತ್ರ ಎ ತಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…