ಮೈಸೂರು

ಸಾಧ‌ಕರನ್ನು ಗುರುತಿಸಿ ಸನ್ಮಾನಿಸುವುದೇ ದೊಡ್ಡ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮೈಸೂರು : ಸಾಧಕರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸುವುದೇ ನಿಜವಾದ ದೊಡ್ಡ ಸಾಧನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಹಾಗೂ ಹೋಟೆಲ್ ಮಾಲೀಕರ ಸಂಘ ಹಾಗೂ ಹೋಟೆಲ್ ಮಾಲೀಕರ ಧರ್ಮದತ್ತಿ ಸಹಯೋಗದೊಂದಿಗೆ ಮಹಿಳಾ ಹೋಟೆಲ್ ಉದ್ಯಮಿಗಳು ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಶ್ರಮಿಕರನ್ನು ಅಭಿನಂದಿಸಿ ಮಾತನಾಡಿದ ಸಚಿವರು, ಸಮಾಜದಲ್ಲಿ ಸಾಧಕರನ್ನು ಗುರುತಿಸುವ ಕೆಲಸ ಆಗಬೇಕಿದೆ ಎಂದರು.

ಇವತ್ತಿನ ದಿನಗಳಲ್ಲಿ ಹೋಟೆಲ್ ಉದ್ಯಮ ಎಂಬುದು ತಮಾಷೆ ಅಲ್ಲ. ಎಲ್ಲಾ ವರ್ಗದವರನ್ನು ಅತಿಥಿ ದೇವೋಭವ ಅಂತ ಸೇವೆ ಮಾಡುವುದೇ ಹೋಟೆಲ್ ಉದ್ಯಮದ ಕೆಲಸ. ಮೈಸೂರಿನ ಹೋಟೆಲ್ ಉದ್ಯಮಿಗಳು, ಸಹಕಾರ ಬ್ಯಾಂಕ್ ಸ್ಥಾಪಿಸುವ ಮೂಲಕ ಎಲ್ಲರಿಗೂ ಆಶ್ರಯ ನೀಡುತ್ತಿದ್ದಾರೆ ಎಂದು ಹೇಳಿದರು. ನಾನು ಕೂಡ ಬೆಳಗಾವಿಯಲ್ಲಿ ಹೋಟೆಲ್‌ ಹೊಂದಿರುವೆ, ಎರಡು ಸಕ್ಕರೆ ಕಾರ್ಖಾನೆಯನ್ನು ಹೊಂದಿರುವೆ, ಹೀಗಾಗಿ ಹೋಟೆಲ್ ಉದ್ಯಮದ ಬಗ್ಗೆ ಅಲ್ಪ ಸ್ವಲ್ಪ ತಿಳಿದುಕೊಂಡಿರುವೆ ಎಂದರು. ಸಂಘಟನೆ, ಸಂಘ- ಸಂಸ್ಥೆಗಳನ್ನು ಕಟ್ಟುವುದು ತಮಾಷೆಯ ಮಾತಲ್ಲ.

ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ

ಹಸಿದವರಿಗೆ ಅನ್ನ ಹಾಕುವ ಮೂಲಕ ಸಾಮಾಜಿಕ ಕಾರ್ಯಕ್ರಮವನ್ನು ಹೋಟೆಲ್ ಉದ್ಯಮದವರು ಮಾಡುತ್ತಿದ್ದಾರೆ. 25 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಈ ಸೊಸೈಟಿಗೆ ಅಡಿಗಲ್ಲು ಹಾಕಿದ್ದರು. ಅವರೇ ಬೆಳ್ಳಿ ಹಬ್ಬದ ಸಮಾರಂಭವನ್ನು ಉದ್ಘಾಟನೆ ಮಾಡಿದ್ದಾರೆ. ಇದು ನಿಜಕ್ಕೂ ಸೊಸೈಟಿಯ ದೊಡ್ಡ ಸಾಧನೆ. ಈ ಹೋಟೆಲ್ ಸೊಸೈಟಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು. ಇವತ್ತು ಕರಾವಳಿ ಭಾಗದ ಉದ್ಯಮಿಗಳು ಅದರಲ್ಲೂ ಹೋಟೆಲ್ ಉದ್ಯಮಿಗಳು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಒಂದೊಂದು ಕೋಟಿ ರೂ. ದೇಣಿಗೆ ನೀಡುತ್ತಾರೆ.

ಇದು ಅವರ ಧನ್ಯತೆಯನ್ನು ತೋರುತ್ತದೆ‌ ಎಂದರು. ವಿವಿಧ ಸ್ತರದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಅದರಲ್ಲೂ ನರ್ಸ್ ಗಳ ಸೇವೆ ನಿಜಕ್ಕೂ ಶ್ಲಾಘನೀಯ, ನಾನು ಅಪಘಾತದಿಂದ ಆಸ್ಪತ್ರೆಯಲ್ಲಿದ್ದಾಗ ನರ್ಸ್ ಗಳೇ ನನಗೆ ಧೈರ್ಯ ತುಂಬಿದರು ಎಂದು ಹೇಳಿದರು. ಈ ವೇಳೆ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾರಾಯಣ ವಿ ಹೆಗಡೆ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಸಿ, ರವಿ ಶಾಸ್ತ್ರಿ, ಆನಂದ್ ಎಂ.ಶೆಟ್ಟಿ, ಸುಮಿತ್ರ ಎ ತಂತ್ರಿ ಸೇರಿದಂತೆ ಹಲವರು  ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago