Mysore
29
light rain

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ: ಐವರಿಗೆ ಗಾಯ

house catches fire

ಹುಣಸೂರು: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ.

ನಿಂಗರಾಜು ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡಿದೆ.

ಪರಿಣಾಮ ಮನೆಯಲ್ಲಿದ್ದ ಇಬ್ಬರು, ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:- ಡೆಂಗಿ ಜ್ವರ ನಿಯಂತ್ರಿಸಲು ಜನಪ್ರತಿನಿಧಿಗಳ ಅಹಕಾರ ಅಗತ್ಯ : ಡಾ.ಸುರ್ವಣ 

ಘಟನೆಯಲ್ಲಿ ನಿಂಗರಾಜು, ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಪ್ರಕರಣ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ನೀಡಿಗಾಯಾಳುಗಳ ಆರೋಗ್ಯ ವಿಚಾರಿಸಿ, ಸೂಕ್ತಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Tags:
error: Content is protected !!