ಸಾಲಿಗ್ರಾಮ : ತಾಲ್ಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮ ವ್ಯಾಪ್ತಿಯ ಕಳ್ಳಿಕೊಪ್ಪಲಿನಲ್ಲಿ ಮಳೆಯಿಂದ ವಾಸದ ಮನೆ ಗೋಡೆಯು ಕುಸಿದು ಬಿದ್ದಿದೆ.
ಗ್ರಾಮದ ಮಲ್ಲೇಗೌಡರ ಮಗ ಸ್ವಾಮಿ ಎಂಬವರಿಗೆ ಸೇರಿದ ವಾಸದ ಮನೆಯ ಪ್ರಮುಖ ಗೋಡೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದಿದೆ. ಬಿದ್ದಂತಹ ಗೋಡೆಯು ಮನೆಯ ಒಳಭಾಗಕ್ಕೆ ಬೀಳದೆ ಹೊರಭಾಗಕ್ಕೆ ಬಿದ್ದಿದ್ದರಿಂದ ಮನೆಯಲ್ಲಿದ್ದವರಿಗೆ ಪ್ರಾಣಾಪಾಯವಾಗಿಲ್ಲ. ಆದರೆ, ಈ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ.
ಇದನ್ನು ಓದಿ: ಭಾರಿ ಮಳೆಗೆ ಮನೆ ಗೋಡೆ ಕುಸಿತ
ಕಡು ಬಡತನದಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಸ್ವಾಮಿ ಅವರ ಕುಟುಂಬವು ಈ ಮನೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದರು. ಆದರೆ ತಮ್ಮ ವಾಸದ ಮನೆಯ ಗೋಡೆಯು ಕುಸಿದು ಬಿದ್ದಿರುವುದರ ಜೊತೆಗೆ ಉಳಿದಿರುವ ಗೋಡೆಯು ಬಿರುಕು ಬಿಟ್ಟಿದ್ದು, ಅದು ಕೂಡ ಯಾವ ಕ್ಷಣದಲ್ಲಾದರೂ ಬೀಳುವ ಸಂಭವವಿದೆ.
ಘಟನಾ ಸ್ಥಳಕ್ಕೆ ಗ್ರಾಪಂ ಸದಸ್ಯ ಡಿ.ಕೃಷ್ಣ, ಮಾಜಿ ಉಪಾಧ್ಯಕ್ಷ ಕೋಮಲಾಚಾರಿ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು. ಸ್ವಾಮಿ ಅವರ ಕುಟುಂಬಕ್ಕೆ ತಾಲೂಕು ಹಾಗೂ ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.





