ನಂಜನಗೂಡು: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡ ಕುಟುಂಬ ಈಗ ಸೂರಿಲ್ಲದೇ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.
ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಹಶೀಲ್ದಾರ್‌ಗೆ ವರದಿ ಕಳುಹಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.





