ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಮೂರ್ತಿ ಎಂಬುವವರ ಮನೆ ಇದಾಗಿದ್ದು, ಮನೆಯವರು ಕೂಲಿ ಮಾಡಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ.
ಕೂಲಿ ನಂಬಿಕೊಂಡು ಜೀವನ ನಡೆಸುತ್ತಿದ್ದ ಶಿವಮೂರ್ತಿ ಕುಟುಂಬ ಈಗ ಮನೆ ಗೋಡೆ ಕುಸಿತದಿಂದ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.





