ಮೈಸೂರು : ಜಿಲ್ಲೆಯಲ್ಲಿ ಅ.೧೭ ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿರುದ್ಯೋಗ ಯುವಕ ಯುವತಿಯರ ನೊಂದಣಿ ಮಾಡಿಸಬೇಕು. ಈಗಾಗಲೇ ೧೬ ಸಾವಿರ ನೊಂದಣಿ ಆಗಿದೆ. ನೊಂದಣಿ ಪ್ರಕ್ರಿಯೆಯ ಡ್ರ್ತ್ಯೈವ್ ಮಾಡಿಸಬೇಕು. ನೋಂದಣಿ ಪ್ರಕ್ರಿಯೆಗೆ ಲಿಂಕ್ httpo://udyogamela.kodckarnataka.com/uoer/oignup ಮೂಲಕ ಮಾಡಿಕೊಳ್ಳಬೇಕು. ಬೃಹತ್ ಮೇಳದಲ್ಲಿ ೨೦೦ ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ತಂಬಾಕು ಹರಾಜು ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಭಾಗಿ
ಉದ್ಯೋಗ ಮೇಳ ಕೇವಲ ಪದವಿ ಪಡೆದವರಿಗೆ ಮಾತ್ರವಲ್ಲ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಬಹುದಾಗಿದೆ. ಯುವ ನಿಽಯಲ್ಲಿ ನೋಂದಣಿ ಆಗಿರುವವರನ್ನು ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಮಾಡಬೇಕು. ಉದ್ಯೋಗ ಮೇಳದ ಯಶಸ್ವಿಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿ ಇರುವ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೧೧ ಸಾವಿರ ನಿರುದ್ಯೋಗಿಗಳು ಯುವನಿಽ ಯೋಜನೆಯಡಿ ನೋಂದಣಿ ಆಗಿದ್ದಾರೆ. ಇವರೆಲ್ಲರನ್ನೂ ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಮಾಹಿತಿ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು. ಕೇವಲ ನೋಂದಣಿ ಆಗುವದು ಮಾತ್ರವಲ್ಲ ಅವರೆಲ್ಲರೂ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉದ್ಯೋಗ ವಿನಿಮಯ ಇಲಾಖೆಯ ಅಽಕಾರಿಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಇರುವ ಖಾಸಗಿ ಕಂಪನಿಗಳು ಎನ್ ರೋಲ್ ಆಗುವಂತೆ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…