ಮೈಸೂರು : ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ ಸಾಂಸ್ಕೃತಿಕ ರಾಜಧಾನಿಯಲ್ಲಿ “ಬೃಹತ್ ಉದ್ಯೋಗ ಮೇಳ” ಆಯೋಜಿಸಿದೆ.
ಮೈಸೂರಿನ ಜಿಲ್ಲೆಯ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ. ಉದ್ಯೋಗ ಮೇಳದ ಕುರಿತು ಮಾಹಿತಿ ಪಡೆದುಕೊಂಡಿರುವ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಆಕಾಂಕ್ಷಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನು ಓದಿ: ಅಕ್ಟೋಬರ್.17ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಸಚಿವ ಡಾ.ಶರಣ ಪ್ರಕಾಶ್ ಆರ್ ಪಾಟೀಲ್
ನೋಂದಣಿ ಮಾಡಿಕೊಳ್ಳಿ
ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿಯೂ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
45000 ಉದ್ಯೋಗ ದೊರೆಯುವ ನಿರೀಕ್ಷೆ
ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದೆ. ಸುಮಾರು 45000 ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು.
ಉದ್ಯೋಗ ಮೇಳದ ಯಶಸ್ವಿ
ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರೆತಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…