ಮೈಸೂರು

ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ ಪರದಾಟ

ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ ನಿತ್ಯ ನರಕ ಅನುಭವಿಸುತ್ತಿದ್ದಾರೆ.

ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ 136 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದ ಹುಲ್ಲಹಳ್ಳಿ ಗ್ರಾಮದಲ್ಲಿ ಕಪಿಲಾ ನದಿ ಹರಿಯುತ್ತಿದ್ದರೂ ಜನರು ನೀರಿಲ್ಲದೇ ಪರದಾಡುತ್ತಿದ್ದಾರೆ.

ಗ್ರಾಮದ 6, 7ನೇ ವಾರ್ಡಿನಲ್ಲಿ ಸತತ ಮೂರು ತಿಂಗಳಿಂದ ಕುಡಿಯುವ ನೀರಿಗಾಗಿ ಜನ‌‌ ಪರದಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನ ಇಲ್ಲದಂತಾಗಿದ್ದು, ಜನರ ಸಮಸ್ಯೆಗೆ ಇಲ್ಲಿನ ಆಡಳಿತ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

3 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

3 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

3 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

3 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

3 hours ago