ಮೈಸೂರು: ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಹುಲ್ಲಹಳ್ಳಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು.
ಸುದ್ದಿ ಬಿತ್ತರವಾಗುತ್ತಿದ್ದಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಆದೇಶದ ಮೇರೆಗೆ ಹುಲ್ಲಹಳ್ಳಿ ಪಿಡಿಒ ಶ್ರೀಧರ್ ಅವರು ಕ್ರಮ ಕೈಗೊಂಡಿದ್ದು, ಹಲವು ಕಡೆ ಕಾರ್ಯಚರಣೆ ನಡೆಸಿ 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದಾರೆ. ಸೆರೆ ಹಿಡಿದ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಬಿಡುಗಡೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.





