ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ದಾಸಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿವೆ.
ಶೌಚಾಲಯ ಗುಂಡಿ ಕುಸಿದು ಬಿದ್ದ ಹಿನ್ನಲೆಯಲ್ಲಿ ದುರಸ್ತಿ ಕಾರ್ಯ ನಡೆಸುವ ವೇಳೆ ಶೌಚಾಲಯದ ಗುಂಡಿ ಒಳಗೆ ಮೂಳೆಗಳು ಪತ್ತೆಯಾಗಿವೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರ್ಕಲ್ ಇನ್ ಸ್ಪೆಕ್ಟರ್ ಶಬೀರ್ ಹುಸೇನ್, ಡಿವೈಎಸ್ಪಿ ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾಸಪ್ರಕಾಶ ಮತ್ತು ತಂದೆ ಜೇಕಬ್ ಮನೆಯಲ್ಲಿ ವಾಸವಾಗಿದ್ದರು. ಜೇಕಬ್ ಸಾಯುವ ಮೂರ್ನಾಲ್ಕು ತಿಂಗಳ ಹಿಂದೆಯೇ ದಾಸಪ್ರಕಾಶ್ ಸತ್ತಿರುವ ಶಂಕೆ ವ್ಯಕ್ತವಾಗಿದೆ.
ದಾಸಪ್ರಕಾಶ್‌ಗೆ ಹೆಂಡತಿ ಹಾಗೂ ಮಕ್ಕಳಿದ್ದಾರೆ. ಅವರನ್ನು ಸರಿಯಾಗಿ ನೋಡಿಕೊಳ್ಳದ ಕಾರಣ ಅವರು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ದಾಸ್‌ಪ್ರಕಾಶ್ ನಾಪತ್ತೆಯಾದರೂ ತಂದೆ ಜೇಕಬ್ ಹಾಗೂ ಪತ್ನಿ ಪ್ರಿಯಾ ದೂರು ನೀಡಿರಲಿಲ್ಲ.
ತಂದೆ ಜೊತೆ ಅನ್ಯೋನ್ಯವಾಗಿದ್ದ ದಾಸಪ್ರಕಾಶ್ ತಂದೆ ನಿಧನವಾದಾಗ ಬಂದಿರಲಿಲ್ಲ. ಇದೀಗ ಮನೆಯ ಶೌಚಾಲಯದ ಟ್ಯಾಂಕ್ ಕ್ಲೀನ್ ಮಾಡುವಾಗ ಮನುಷ್ಯನ ಮೂಳೆ, ಬುರುಡೆ ಸಿಕ್ಕಿದ್ದು ಸಾವಿನ ಸುತ್ತು ಅನುಮಾನ ಹೆಚ್ಚಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…