ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ.
ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಹುಲಿ ಮರಿಯೊಂದು ಜಮೀನಿನಲ್ಲಿ ಓಡಾಡುತ್ತಿತ್ತು. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ.
ಸದ್ಯ ಹುಲಿ ಆರೋಗ್ಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ ಭಾಗದ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮನೆಮಾಡಿದೆ.





