Mysore
29
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ‘ಸ್ಕೈ ಗೋಲ್ಡ್ಸ್ ಅಂಡ್ ಡೈಮಂಡ್ಸ್’ ಎಂಬ ಚಿನ್ನದ ಅಂಗಡಿಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಜೊತೆಗೆ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನು ಓದಿ: ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ಮುಸುಕು ಧರಿಸಿದ ದರೋಡೆಕೋರರು ಅಂಗಡಿಗೆ ನುಗ್ಗಿ, ಆಯುಧಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ನಂತರ ಮ್ಯಾನೇಜರ್​ ಮೇಲೆ ಗುಂಡಿನ ದಾಳಿ ನಡೆಸಿ ಬರೋಬ್ಬರಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಬಳಿಕ ಅಂಗಡಿಯ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ದರು. ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡರು ಎನ್ನಲಾಗಿದೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇತರರು ಮುಸುಕು ಧರಿಸಿದ್ದರು ಎಂದು ತಿಳಿದು ಬಂದಿದೆ.

ಇನ್ನೂ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!