ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ‘ಸ್ಕೈ ಗೋಲ್ಡ್ಸ್ ಅಂಡ್ ಡೈಮಂಡ್ಸ್’ ಎಂಬ ಚಿನ್ನದ ಅಂಗಡಿಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಜೊತೆಗೆ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇದನ್ನು ಓದಿ: ವರ್ಷದ ಕೊನೆಯ ಮನ್ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ಮುಸುಕು ಧರಿಸಿದ ದರೋಡೆಕೋರರು ಅಂಗಡಿಗೆ ನುಗ್ಗಿ, ಆಯುಧಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ನಂತರ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ಬರೋಬ್ಬರಿ 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಬಳಿಕ ಅಂಗಡಿಯ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ದರೋಡೆಕೋರರು ಅಂಗಡಿಯಲ್ಲಿದ್ದ ಚಿನ್ನಾಭರಣಗಳನ್ನು ಬ್ಯಾಗ್‌ಗಳಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಘಟನೆಯ ಸಮಯದಲ್ಲಿ ಅಂಗಡಿಯಲ್ಲಿ ಕೆಲವು ಗ್ರಾಹಕರು ಮತ್ತು ಸಿಬ್ಬಂದಿ ಇದ್ದರು. ದರೋಡೆಕೋರರು ಎಲ್ಲರನ್ನೂ ಬೆದರಿಕೆ ಹಾಕಿ ನಿಯಂತ್ರಣಕ್ಕೆ ತೆಗೆದುಕೊಂಡರು ಎನ್ನಲಾಗಿದೆ. ನಂತರ ಒಬ್ಬ ದರೋಡೆಕೋರ ಮಾತ್ರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇತರರು ಮುಸುಕು ಧರಿಸಿದ್ದರು ಎಂದು ತಿಳಿದು ಬಂದಿದೆ.
ಇನ್ನೂ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…