ಮೈಸೂರು

ಹುಣಸೂರು | ವಿಜೃಂಭಣೆಯ ದೊಡ್ಡ ಆಲದ ಮರದ ಜಾನಪದ ಜಾತ್ರೆ

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು.

ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, ಪೂಜಾಕುಣಿತ, ಸುಗ್ಗಿ ಕುಣಿತ, ದೊಳ್ಳುಕುಣಿತ, ಫಲಕ ಕುಣಿತ, ಪಟಕುಣಿತ, ಆದಿವಾಸಿ ನೃತ್ಯ, ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ನೃತ್ಯದೊಂದಿಗೆ ಗ್ರಾಮದ ಹೆಬ್ಬಾಗಿಲಿನಿಂದ ಹೊರಟ ಜಾನಪದ ಕಲಾತಂಡಗಳ ಪ್ರದರ್ಶನಕ್ಕೆ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಹೊನ್ನನಾಯಕನಹಳ್ಳಿಯ ಕಪ್ಪಡಿಕ್ಷೇತ್ರದ ಪೀಠಾಧಿಪತಿ ಶ್ರೀಕಂಠ ಸಿದ್ದಲಿಂಗರಾಜೇಅರಸ್ ಚಾಲನೆ ನೀಡಿದರು.

ಮೆರವಣಿಗೆ ಮದ್ಯದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಸೇರಿಕೊಂಡರು. ಮೆರವಣಿಗೆಯು ಆಲದ ಮರದ ಆವರಣಕ್ಕೆ ಆಗಮಿಸಿ ಅಲ್ಲಿ ಕಲಾತಂಡಗಳು ಪ್ರದರ್ಶನ ನೀಡಿ ಜಾತ್ರೆಗೆ ಕಳೆಕಟ್ಟಿದರು. ಈ ವೇಳೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಚಿತ್ರನಟಿ ಭವ್ಯ, ಏಕಲವ್ಯಪ್ರಶಸ್ತಿ ಪುರಸ್ಕೃತ ಎ.ವಿ.ರವಿ, ಚಿತ್ರನಟ ಗಣೇಶ್‌ರಾವ್ ಕೇಸರ್‌ಕರ್, ಸಮಿತಿಯ ರವಿ ಮಾತನಾಡಿದರು. ಜಾನಪದ ಗಾಯಕ ಡಾ.ಮೈಸೂರುಗುರುರಾಜ್ ಜಾನಪದ ಗೀತೆಗಳನ್ನು ಹಾಡಿದರು. ಸಾಧನಾಪುರ ಪದವಿ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಕುಡಿನೀರು ಮುದ್ದನಹಳ್ಳಿ, ದಾಸನಪುರ ಗ್ರಾಮದ ಮುಖಂಡರು, ಗ್ರಾಮಸ್ಥರು ಬಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

26 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

52 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

55 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago