ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಆನಂದ್ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್‌ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…