ಮೈಸೂರು

ಹುಣಸೂರು | ಚಿಕ್ಕಪ್ಪನಿಂದಲೇ ಮಗುವಿನ ಮೇಲೆ ಹಲ್ಲೆ

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಆನಂದ್‌ ಹಲ್ಲೆ ಆರೋಪಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರೋಪಿ ಆನಂದನ ಪತ್ನಿಯ ಅಕ್ಕನ ಮಗಳು ತನ್ನ ಮಾತು ಕೇಳಲಿಲ್ಲವೆಂದು ಕೋಪೋದ್ರಿಕ್ತನಾದ ಆನಂದ್ ರಿಪೀಸ್ ಪಟ್ಟಿ, ಸ್ಕೃಡ್ರೈವರ್‌ನಿಂದ ಮಗುವಿನ ಹಲ್ಲೆ ನಡೆಸಿದ ಪರಿಣಾಮ ಬಾಲಕಿಯ ಎರಡೂ ಕೈಗಳ ಮೂಳೆ ಮುರಿದಿದೆ. ತಲೆಗೂ ಪೆಟ್ಟಾಗಿದ್ದು, ಆಘಾತಕ್ಕೊಳಗಾಗಿರುವ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ನಂತರ ಆಟೋದಲ್ಲಿ ಪರಾರಿಯಾಗಿದ್ದ ಆನಂದನನ್ನು ಬೆಳವಾಡಿಯಲ್ಲಿ ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಸ್ವಾಮಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

1 hour ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

5 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

6 hours ago