ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ.
ಆಟೋ ಸಹಿತ ಚಾಲಕ ರಾಜು ಶವವನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





