Mysore
18
scattered clouds

Social Media

ಭಾನುವಾರ, 25 ಜನವರಿ 2026
Light
Dark

ಹುಣಸೂರು ಹೈಟೆಕ್ ಆಸ್ಪತ್ರೆ ಶೀಘ್ರ ಜನಸೇವೆಗೆ : ಶಾಸಕ ಹರೀಶ್‌ಗೌಡ

ಹುಣಸೂರು : ನಗರದ ಬೈಪಾಸ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಸಾಮರ್ಥ್ಯದ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲಿಸಿದರು.

ಆಸ್ಪತ್ರೆ ಆವರಣದಲ್ಲಿ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಳೆದ ಅಽವೇಶನದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಹೆಚ್ಚುವರಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿದ್ದರ ಪರಿಣಾಮ ಸರ್ಕಾರದಿಂದ ೯.೫ ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ೮ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಶೀಘ್ರವೇ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಹೆಚ್ಚುವರಿ ಅನುದಾನದ ಸಹಾಯದಿಂದ ಬಾಕಿ ಉಳಿದಿರುವ ಕಾಮಗಾರಿಗಳಾದ ಶವಾಗಾರ, ಎಸ್‌ಟಿಪಿ, ಇಟಿಪಿ, ನಾಲ್ಕು ಲಿಫ್ಟ್‌ಗಳ ಅಳವಡಿಕೆ ಮಾಡಲಾಗುವುದು ಎಂದರು.

ಡ್ರೈನೇಜ್, ಕಾಂಪೌಂಡ್, ನೆಟ್‌ವರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಿಸಿ ಕ್ಯಾಮರಾ ಅಳವಡಿಕೆ ಮುಂತಾದ ಕಾಮಗಾರಿಗಳು ನಡೆಯಲಿವೆ ಎಂದರು.

ಹಳೆಯ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನೂತನ ಕಟ್ಟಡದಲ್ಲಿ ವೈದ್ಯರ ಕೊರತೆ, ಸಿಬ್ಬಂದಿ ಇವೆಲ್ಲವುಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ೨೦೨೬ರ ಮಧ್ಯಭಾಗದಲ್ಲಿ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಆಶಯ ಹೊಂದಿದ್ದೇನೆ ಎಂದರು.

ಇಇ ಜಗದೀಶ್, ನಾಗರಾಜ್, ಸತೀಶ್ ಪಾಪಣ್ಣ, ನಗರಸಭಾಧ್ಯಕ್ಷ ಮಾಲಿಕ್ ಪಾಷ, ಮಾಜಿ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ವೈದ್ಯಾಧಿಕಾರಿ ಡಾ.ಮಹದೇವಸ್ವಾಮಿ, ಪ್ರಭಾರ ಟಿಎಚ್‌ಒ ಡಾ.ದರ್ಶನ್, ಪೌರಾಯುಕ್ತ ಕೆ.ಮಾನಸಾ, ಇತರರು ಹಾಜರಿದ್ದರು.

Tags:
error: Content is protected !!