ಹುಣಸೂರು : ನಗರದ ಬೈಪಾಸ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ೧೦೦ ಹಾಸಿಗೆ ಸಾಮರ್ಥ್ಯದ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ಕಟ್ಟಡಕ್ಕೆ ಶಾಸಕ ಜಿ.ಡಿ.ಹರೀಶ್ ಗೌಡ ಅಧಿಕಾರಿಗಳೊಡನೆ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆ ಆವರಣದಲ್ಲಿ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಳೆದ ಅಽವೇಶನದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಹೆಚ್ಚುವರಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿದ್ದರ ಪರಿಣಾಮ ಸರ್ಕಾರದಿಂದ ೯.೫ ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ೮ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಶೀಘ್ರವೇ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು. ಹೆಚ್ಚುವರಿ ಅನುದಾನದ ಸಹಾಯದಿಂದ ಬಾಕಿ ಉಳಿದಿರುವ ಕಾಮಗಾರಿಗಳಾದ ಶವಾಗಾರ, ಎಸ್‌ಟಿಪಿ, ಇಟಿಪಿ, ನಾಲ್ಕು ಲಿಫ್ಟ್‌ಗಳ ಅಳವಡಿಕೆ ಮಾಡಲಾಗುವುದು ಎಂದರು.
ಡ್ರೈನೇಜ್, ಕಾಂಪೌಂಡ್, ನೆಟ್‌ವರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಸಿಸಿ ಕ್ಯಾಮರಾ ಅಳವಡಿಕೆ ಮುಂತಾದ ಕಾಮಗಾರಿಗಳು ನಡೆಯಲಿವೆ ಎಂದರು.
ಹಳೆಯ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನೂತನ ಕಟ್ಟಡದಲ್ಲಿ ವೈದ್ಯರ ಕೊರತೆ, ಸಿಬ್ಬಂದಿ ಇವೆಲ್ಲವುಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ೨೦೨೬ರ ಮಧ್ಯಭಾಗದಲ್ಲಿ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಆಶಯ ಹೊಂದಿದ್ದೇನೆ ಎಂದರು.
ಇಇ ಜಗದೀಶ್, ನಾಗರಾಜ್, ಸತೀಶ್ ಪಾಪಣ್ಣ, ನಗರಸಭಾಧ್ಯಕ್ಷ ಮಾಲಿಕ್ ಪಾಷ, ಮಾಜಿ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ವೈದ್ಯಾಧಿಕಾರಿ ಡಾ.ಮಹದೇವಸ್ವಾಮಿ, ಪ್ರಭಾರ ಟಿಎಚ್‌ಒ ಡಾ.ದರ್ಶನ್, ಪೌರಾಯುಕ್ತ ಕೆ.ಮಾನಸಾ, ಇತರರು ಹಾಜರಿದ್ದರು.
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…